ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವಂತೆ ನೌಕರರ ಸಂಘ ಮನವಿ.! - BC Suddi
ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವಂತೆ ನೌಕರರ ಸಂಘ ಮನವಿ.!

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವಂತೆ ನೌಕರರ ಸಂಘ ಮನವಿ.!

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದೆ.

ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಪತ್ರ ಬರೆದಿದ್ದು, ಕಳೆದ ವರ್ಷ ಕೋವಿಡ್ ಆತಂಕದ ನಡುವೆ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಯಶಸ್ವಿಯಾಗಿ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ನಡೆಸಿದ್ದಾರೆ.

ಆದರೆ ಈ ಸಂದರ್ಭದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಅನೇಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುತ್ತದೆ., ಇಂತಹ ಗಂಭೀರ ಸ್ಥಿತಿಯಲ್ಲಿ ಪಿಯಸಿ ಪರೀಕ್ಷೆ ನಡೆಸುವುದಾಗಲಿ , ಮೌಲ್ಯಮಾಪನ ನಡೆಸುವುದು ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರ ಹಿತದೃಷ್ಟಿಯಿಂದ ಅಪಾಯಕಾರಿ ತೀಮಾನವಾಗಿರುತ್ತದೆ. ಆದ್ದರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವಂತೆ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ.!