ಬೆಂಗಳೂರು; ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಕರ್ನಾಟಕ ಯೋಜನೆ ಅಡಿ ರಾಜ್ಯದ 5.09 ಕೋಟಿ ಮಂದಿಗೆ ಉಚಿತ ಆರೋಗ್ಯ ಕಾರ್ಡ್ ವಿತರಣೆ.
ನಾಳೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ನಾಳೆಯಿಂದಲೇ ಎಲ್ಲಾ ಜಿಲ್ಲೆಗಳಲ್ಲೂ ಈ ಕಾರ್ಡ್ ಸೃಜಿಸಿ ವಿತರಿಸಲಾಗುತ್ತದೆ. ಈ ಕಾರ್ಡ್ ತೋರಿಸಿ ದೇಶದ ಯಾವುದೇ ನೊಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.