ಬೆಂಗಳೂರು: ನಿರ್ಮಾಣ ಹಂತದ ಖಾಸಗಿ ಆಸ್ಪತ್ರೆಯ ಮೇಲ್ಛಾವಣಿ ಕುಸಿದಿದ್ದು, ಕೆಳ ಭಾಗದಲ್ಲಿ ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದು, ಇಬ್ಬರನ್ನು ರಕ್ಷಿಸಲಾಗಿದ್ದು ಮತ್ತಿಬ್ಬರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ.

ಆಸ್ಪತ್ರೆಯ ಮುಂಭಾಗದಲ್ಲಿ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಇಂದು ಬೆಳಗ್ಗೆ ಆರು ಗಂಟೆ ಸುಮಾರಿಗೆ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಇನ್ನು ಐವರು ಕಾರ್ಮಿಕರು ಕೆಲಸಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದು, ಮೇಲ್ಛಾವಣಿ ಕುಸಿಯುತ್ತಿದ್ದಂತೆ ಓರ್ವ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾನೆ. ನಾಲ್ವರು ಅವಶೇಷಗಳಡಿ ಸಿಲುಕಿದ್ದರು.

ಸದ್ಯ ರಫಿಸಾಬ್ ಮತ್ತು ಬಸವರಾಜು ಅವಶೇಷಗಳಡಿ ಸಿಲುಕಿದ್ದಾರೆ. ಇಬ್ಬರು ರಾಯಚೂರು ಮೂಲದ ಕಾರ್ಮಿಕರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.