ನೀವು ಬೆಂಗಳೂರಿನಿಂದ ಮೈಸೂರಿಗೆ ಹೋಗುವವರ.? ಹಾಗಾದರೆ ಸುದ್ದಿ ಓದಿ ಬಿಡ್ರಿ.! ಏಕೆ.? - BC Suddi
ನೀವು ಬೆಂಗಳೂರಿನಿಂದ ಮೈಸೂರಿಗೆ ಹೋಗುವವರ.? ಹಾಗಾದರೆ ಸುದ್ದಿ ಓದಿ ಬಿಡ್ರಿ.! ಏಕೆ.?

ನೀವು ಬೆಂಗಳೂರಿನಿಂದ ಮೈಸೂರಿಗೆ ಹೋಗುವವರ.? ಹಾಗಾದರೆ ಸುದ್ದಿ ಓದಿ ಬಿಡ್ರಿ.! ಏಕೆ.?

 

ಮೈಸೂರು : ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್ 19 ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಬೆಂಗಳೂರು ನಗರ ಮತ್ತು ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿದ್ದು, ಮೈಸೂರು ಜಿಲ್ಲೆಯಿಂದ ಅನೇಕ ಉದ್ಯೋಗ-ವ್ಯಾಪಾರದ ಉದ್ದೇಶಗಳಿಗಾಗಿ ಪ್ರತಿ ದಿನ ಬೆಂಗಳೂರು ಜಿಲ್ಲೆಗೆ ಹೋಗಿ ಬರುತ್ತಿರುತ್ತಾರೆ. ಅಲ್ಲದೇ ಮೈಸೂರು ಜಿಲ್ಲೆಯ ಪ್ರವಾಸಿ ತಾಣವಾಗಿರುವುದರಿಂದ ಅನೇಕ ಪ್ರವಾಸಿಗರು ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿರುತ್ತಾರೆ. ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕಳೆದ 74 ಗಂಟೆಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

error: Content is protected !!