ಬೆಂಗಳೂರು: ನ್ಯಾಯಾಂಗ ವ್ಯವಸ್ಥೆ ಹಾಗೂ ನ್ಯಾಯಾಧೀಶರ ನೇಮಕಾತಿಯಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗದ ಬಗ್ಗೆ ರಾಜಕಾರಣಿಗಳಿಗೆ ಅಷ್ಟೊಂದು ಜ್ಞಾನ ಇರುವುದಿಲ್ಲ. ನ್ಯಾಯಾಂಗದಲ್ಲಿ ಕಾರ್ಯಾಂಗ ಹಸ್ತಕ್ಷೇಪ ಮಾಡುವುದು ಅಪಾಯಕಾರಿ ಬೆಳವಣಿಗೆ, ರಾಜಕಾರಣಿಗಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆಯೇ ಹೊರತು, ಸರಿಪಡಿಸುವ ಕೆಲಸ ಯಾರೂ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.