ಶಿವಮೊಗ್ಗ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆಯೋ ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ಪೊಲೀಸರು ರೇಡ್ ಮಾಡಿದ್ದಾರೆ. ಈ ವಿಷಯ ನನ್ನ ಗಮನಕ್ಕೂ ರೇಡ್ ಮುಂಚೇನೆ ಬಂದಿದೆ.ಶಿವಮೊಗ್ಗದಲ್ಲಿಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪರಪ್ಪನ ಅಗ್ರಹಾರದ ಅಕ್ರಮ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸುವಂತೆ ಈಗಾಗಲೇ ಸೂಚಿಸಲಾಗಿದೆ.ಇಲ್ಲಿ ಗಾಂಜಾ ಸೇರಿದಂತೆ ಇತರೆ ವಸ್ತುಗಳ ಪೂರೈಕೆಯನ್ನ ನಿರ್ಬಂಧಿಸುವಂತೆ ಹೇಳುತ್ತೇನೆ ಎಂದು ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾಳೆ ಬೆಂಗೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಹೋದ ಬಳಿಕ ಈ ವಿಚಾರವಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡುತ್ತೇನೆ. ಸೂಕ್ತ ಕ್ರಮವನ್ನೂ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಆರಗ ಜ್ಞಾನೇಂದ್ರ.