ಇಸ್ಲಾಮಾಬಾದ್: 2022ರ ಐಸಿಸಿ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನವು ಮತ್ತೊಮ್ಮೆ ಭಾರತವನ್ನು ಸೋಲಿಸಲಿದೆ ಎಂದು ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಹೇಳಿದ್ದಾರೆ.

ಹೌದು. 2022ರ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಮೆಲ್ಬೋರ್ನ್ ಕ್ರಿಕೆಟ್‌ ಮೈದಾನದಲ್ಲಿ ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಟೀಂ ಇಂಡಿಯಾ ಎದುರಿಸಲಿದೆ. ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡವು ಒಮ್ಮೆಯೂ ಪಾಕ್‌ ವಿರುದ್ಧ ಸೋಲು ಕಂಡಿರಲಿಲ್ಲ. ಆದರೆ ದುಬೈನಲ್ಲಿ ನಡೆದ 2021ರ ಟಿ-20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡವು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನು 10 ವಿಕೆಟ್‌ಗಳಿಂದ ಸೋಲಿಸಿ ನಿಬ್ಬೆರಗಾಗಿಸಿತ್ತು.

ಸದ್ಯ ಇದೇ ವಿಚಾರವಾಗಿ ಮಾತನಾಡಿರುವ ಶೋಯೆಬ್ ಅಖ್ತರ್, ‘ನಮ್ಮ ಪಾಕ್​​ ತಂಡ ಬಲಿಷ್ಠವಾಗಿದೆ. ಉಭಯ ತಂಡಗಳ ನಡುವೆ ಸಾಕಷ್ಟು ಪೈಪೋಟಿ ಇದೆ. ನಮ್ಮ ತಂಡದ ಮೇಲೆ ಅನಗತ್ಯ ಒತ್ತಡ ಹೇರುವುದಿಲ್ಲ. ಆದರೆ ಎಷ್ಟೇ ಒತ್ತಡ ಇದ್ದರೂ, ಭಾರತವನ್ನು ಪಾಕಿಸ್ತಾನ ಸೋಲಿಸುವುದು ಪಕ್ಕಾ’ ಎಂದು ಹೇಳಿದ್ದಾರೆ.