ಬೆಂಗಳೂರು: ಡಾ.ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ಅವರ ಸಹೋದರಿ ಎಸ್.ವಿ. ನಾಗಮ್ಮನವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

81ರ ವಯಸ್ಸಿನ ನಾಗಮ್ಮನವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಕುಟುಂಬಸ್ಥರನ್ನು ಅಗಲಿದ್ದಾರೆ. ಸಹೋದರ ಎಸ್.ಎ. ಚಿನ್ನೇಗೌಡ, ಎಸ್.ಎ. ಗೋವಿಂದರಾಜು, ಎಸ್.ಎ. ಶ್ರೀನಿವಾಸ್ ಹಾಗೂ ತಂಗಿ ಜಯಮ್ಮ ಮತ್ತು ಮಗ ಮಹೇಶ್ ಮೊಮ್ಮಕ್ಕಳನ್ನು ಅವರು ಅಗಲಿದ್ದು, ಸಂಜೆ ಇಳಂದೂರಿನ ಕೆಸ್ತೂರಿನಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.