ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in ಗೆ ಭೇಟಿ ನೀಡಬಹುದು.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ಅನುಭವ: ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ: ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/03/2022