ಮುಂಬೈ : ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಸೋಮವಾರ ಮತ್ತೊಂದು ಪ್ರಕರಣ ದಾಖಲಾಗಿದೆ. ಥಾಣೆಯ ಮುಂಬ್ರಾ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ದ್ವೇಷ ಹರಡುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

ನೂಪುರ್ ಶರ್ಮಾ ವಿರುದ್ಧ ಮುಂಬೈನ ಪೈಡೋನಿ ಪೊಲೀಸ್ ಠಾಣೆಯಲ್ಲಿ ಭಾನುವಾರ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಭಾರತೀಯ ಸುನ್ನಿ ಮುಸ್ಲಿಮರ ಸುನ್ನಿ ಬರೇಲ್ವಿ ಸಂಘಟನೆಯಾದ ರಝಾ ಅಕಾಡೆಮಿಯ ದೂರಿನ ಮೇರೆಗೆ ಕೇಸ್ ದಾಖಲಿಸಲಾಗಿದೆ.