ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ತುಮಕೂರಿನಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಹಾವೇರಿ, ಬೆಳಗಾವಿ, ಗದಗ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಪ್ಪಳ, ಚಾಮರಾಜನಗರ, ಮೈಸೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

( ಸಾಂದರ್ಭಿಕ ಚಿತ್ರ)