ಲಕ್ನೋ: ಉತ್ತರ ಪ್ರದೇಶದ ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ಕುಸ್ತಿಪಟು ಬಬಿತಾ ಪೋಗಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ಕೋವಿಡ್​ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬಬಿತಾ ಪೋಗಟ್ ಸೇರಿ 63 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಮಟ್ಟದಲ್ಲಿರುವ ಕಾರಣ ಆಯೋಗ ರ್‍ಯಾಲಿ ಮತ್ತು ರೋಡ್‌ ಶೋಗಳ ಮೇಲೆ ನಿಷೇಧ ಹೇರಿದೆ.