ನವದೆಹಲಿ: ಶುಕ್ರವಾರದಂದು ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಂಭವಿಸಿ 27 ಜನರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಅರಂವಿಂದ ಕೇಜ್ರಿವಾಲ್ ಅವರು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಮುಂಡ್ಕಾಗೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಅವರು ಮಾಹಿತಿ ಸಂಗ್ರಹಿಸಿದ್ದಾರೆ. ಈ ನಡುವೆ, ಅವಘಡದ ಕುರಿತಂತೆ ದೆಹಲಿ ಸರ್ಕಾರವು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಆದೇಶಿಸಿದೆ. ಅಲ್ಲದೆ, ಮೃತರ ಕುಟುಂಬಗಳಿಗೆ ರೂ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಮತ್ತೊಂದೆಡೆ ಗಾಯಗೊಂಡ 12 ಜನರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಭಾರೀ ಬೆಂಕಿಯ ಕಾರಣದಿಂದಾಗಿ ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಪತ್ತೆಹಚ್ಚಲಾಗದ ಸ್ಥಿತಿಯಲ್ಲಿವೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.