ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಮಳೆ ಜೋರು ಈ ಏರಿಯದಲ್ಲಿ.! - BC Suddi
ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಮಳೆ ಜೋರು ಈ ಏರಿಯದಲ್ಲಿ.!

ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಮಳೆ ಜೋರು ಈ ಏರಿಯದಲ್ಲಿ.!

ಬೆಂಗಳೂರು: ಮಧ್ಯಾಹ್ನ 2.40 ಗಂಟೆಯಿಂದಲೇ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿ, ನಂತರ ಜೋರು ಮಳೆ ಬರುತ್ತಿದೆ. ಗಾಳಿಯೂ ಜೋರಾಗಿ ಬೀಸುತ್ತಿದೆ.

ಯಶವಂತಪುರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು- ಸಿಡಿಲು ಸಹಿತ ಮಳೆ ಸುರಿಯುತ್ತಿದೆ.

ಕೊರೊನಾ ಸೋಂಕು ತಡೆಗೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದರಿಂದ ನಗರದಲ್ಲಿ ಜನರ ಓಡಾಟ ಕಡಿಮೆ ಇದೆ. ಮಳೆಯಿಂದಾಗಿ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದಿದೆ.