ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ.! - BC Suddi
ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ.!

ಬೆಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ.!

 

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಮಾಹಿತಿ ನೀಡಿದೆ.

ಏಪ್ರಿಲ್ 8 ಹಾಗೂ 9 ರಂದು ನಿಗದಿಯಾಗಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ ಮಾಡಿ ಬೆಂಗಳೂರು ವಿಶ್ವವಿದ್ಯಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮಾಹಿತಿ ನೀಡಿದೆ. ಹೀಗಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಹೇಳಿದೆ.

error: Content is protected !!