ಬೆಂಗಳೂರು: ದಸರಾ ಮುಗಿದ ನಂತರ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲಾಗುವುದು. ಹೀಗಾಗಿ ಅನ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವವರ ನಿಯೋಜನೆಯನ್ನು ರದ್ದುಗೊಳಿಸಿ ಶಾಲೆಗೆ ಮರಳುವಂತೆ ಸೂಚನೆ ನೀಡಲಾಗಿದೆ.!

ಸಾಕ್ಷರತೆ ಕಾರ್ಯಕ್ರಮ ಸೇರಿದಂತೆ ವಿವಿಧ ಯೋಜನೆಗಳಡಿ ಶಿಕ್ಷಕರನ್ನು ಅನ್ಯ ಇಲಾಖೆಗೆ ನಿಯೋಜಿಸಲಾಗಿದೆ. ಇಂಥವರ ಸೇವಾವಧಿ 2021ರ ಮಾರ್ಚ್ ಗೆ ಕೊನೆಯಾಗಿದೆ. ದಸರಾ ಮುಗಿದ ನಂತರ ಶಾಲೆಗಳು ಆರಂಭವಾಗುತ್ತಿರುವುದರಿಂದ ಇಂತಹ ಶಿಕ್ಷಕರು ಮಾತೃ ಇಲಾಖೆಗೆ ಮರಳಬೇಕು ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಸುಮಾರು 25 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.