ಬೆಂಗಳೂರು: ಹತ್ತನೇ ತರಗತಿ ಪಠ್ಯಪುಸ್ತಕದಲ್ಲಿ ಆರೆಸ್ಸೆಸ್‌ ಸಂಸ್ಥಾಪಕ ಹೆಡ್ಗೆವಾರ್ ಪಠ್ಯ ಸೇರ್ಪಡೆ ವಿಚಾರ ರಾಜ್ಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಹೆಡ್ಗೆವಾರ್ ಪಠ್ಯ ಸೇರಿಸಿ ಭಗತ್ ಸಿಂಗ್ ಪಠ್ಯವನ್ನು ತೆಗೆಯಲಾಗಿದೆ ಎಂಬ ಸುದ್ದಿಯೊಂದು ಹಬ್ಬಿದೆ.

ಇದು ಪ್ರತಿಪಕ್ಷಗಳ ಕಣ್ಣು ಕೆಂಪಗಾಗಿಸಿದ್ದು, ರಾಜಕೀಯ ಪಕ್ಷಗಳ ನಾಯಕರು ಖಂಡನೆ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಭಗತ್ ಸಿಂಗ್ ಪಠ್ಯವನ್ನು ಕೈ ಬಿಟ್ಟಿಲ್ಲ, ಹೆಡ್ಗೆವಾರ್ ಪಠ್ಯ ಸೇರಿಸುವುದರಲ್ಲಿ ತಪ್ಪಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯು ಟಿಪ್ಪು ಸುಲ್ತಾನ್‌ ಕುರಿತ ಪಠ್ಯವನ್ನು ಕೈಬಿಟ್ಟಿದೆ ಎಂಬುವುದು ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಸಚಿವರು ಟಿಪ್ಪು ಪಠ್ಯ ಕೈ ಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.