ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ 6 ಸೀನಿಯರ್ ಇಂಜಿನಿಯರ್ (ಇIII) ಹುದ್ದೆಗಳನ್ನು ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 9, 2022 ಕೊನೆಯ ದಿನಾಂಕವಾಗಿದೆ.
ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿಯಲ್ಲಿ ಸೇವಾನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಸಲ್ಲಿಕೆಯಾದ ಅರ್ಜಿಗಳಲ್ಲಿ ಮಾನದಂಡಗಳ ಪ್ರಕಾರ ಕಿರುಪಟ್ಟಿ(ಶಾರ್ಟ್ ಲಿಸ್ಟ್) ಮಾಡಿ ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.ದ
50,000/- ರಿಂದ 1,60,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ 9 ಫೆಬ್ರವರಿ2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕು
ಕಚೇರಿ ವಿಳಾಸ- DGM (HR/MR, MS &ADSN) Bharat Electronics Limited, Jalahalli Post, Bengaluru-560 013.
ಅರ್ಜಿ ಪ್ರತಿಯ ಪಿಡಿಎಫ್ ಕೊಂಡಿ- https://www.bel-india.in/Documentviews.aspx?fileName=Web%20advt%20EIII%20MR-25-01-2022.pdf