ಆಫ್ರಿಕಾ: ಭಾರೀ ಮಳೆ, ಪ್ರವಾಹ ಹಾಗೂ ಭೂ ಕುಸಿತದಿಂದಾಗಿ ಆಫ್ರಿಕಾದ ರಿಪಬ್ಲಿಕ್ ಆಫ್ ಕಾಂಗೋದ ಕಿನ್ಯಾಸದಲ್ಲಿ 120 ಜನರು ಪ್ರಾಣಕಳೆದುಕೊಂಡಿದ್ದಾರೆ ಎಂದು ರಾಯ್ಕರ್ಸ್ ವರದಿ ಮಾಡಿದೆ.
ರಾಜಧಾನಿಯಾಗಿರುವ ಈ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು ರಸ್ತೆ, ಮನೆಗಳು ಮತ್ತು ಬಂದರು ಪ್ರವಾಹದಲ್ಲಿ ಮುಳುಗಿದೆ ಎಂದು ತಿಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಮುಂದಿನ 3-4 ದಿನಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. !