ಮಂಗಳೂರು : ಖಾಸಗಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್- ಲಾರಿ ಸುಟ್ಟು ಓರ್ವ ಸಜೀವ ದಹನವಾಗಿruv ಘಟನೆ ಮಂಗಳೂರಿನ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಗೂಡ್ಸ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಮತ್ತು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.