ಮುಖ್ಯ ಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲು.! - BC Suddi
ಮುಖ್ಯ ಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲು.!

ಮುಖ್ಯ ಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲು.!

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇತ್ತೀಚೆಗೆ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಮಾಡಿಸಲಾಗಿತ್ತು. ಅಲ್ಲಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಬಿಎಸ್‌ವೈ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಎಂ ಎಸ್ ರಾಮಯ್ಯ ಆಸ್ಪತ್ರೆಯಿಂದ ಅವರನ್ನು ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಅವರ ಕಾರಿನಲ್ಲೇ ಶಿಫ್ಟ್ ಮಾಡಲಾಗಿದೆ.