ಮೇ 2 ರ ಬಳಿಕ ಮುಖ್ಯ ಮಂತ್ರಿ ಯಡಿಯೂರಪ್ಪ ಬದಲಾವಣೆ.! - BC Suddi
ಮೇ 2 ರ ಬಳಿಕ ಮುಖ್ಯ ಮಂತ್ರಿ ಯಡಿಯೂರಪ್ಪ ಬದಲಾವಣೆ.!

ಮೇ 2 ರ ಬಳಿಕ ಮುಖ್ಯ ಮಂತ್ರಿ ಯಡಿಯೂರಪ್ಪ ಬದಲಾವಣೆ.!

 

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ರಾಜ್ಯದಲ್ಲಿ ಉಪಚುನಾವಣೆ ಹಾಗೂ ಮೇ. 2 ರ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಖಚಿತ ಎಂದು ಹೇಳಿದ್ದಾರೆ.

ಏಪ್ರಿಲ್ 17 ರ ನಂತರ ಶಾಸಕರು, ಸಚಿವರು ಬಹಳ ಮಂದಿ ರೊಚ್ಚಿಗೇಳುವವರಿದ್ದಾರೆ. ಸೂರ್ಯ ಚಂದ್ರ ಇರುವವರೆಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಅಂದ್ರೆ ಏನರ್ಥ? ಯಡಿಯೂರಪ್ಪ ಕುಟುಂಬದವರಿಗೇನಾದರೂ ರಾಜ್ಯವನ್ನು ಬರೆದುಕೊಟ್ಟಿದ್ದಾರಾ? ಪಕ್ಷದ ಸಿದ್ಧಾಂತದ ಹಿನ್ನೆಲೆಯಲ್ಲಿ ಎರಡು ವರ್ಷ ಅವಕಾಶ ಕೊಟ್ಟಿದ್ದೇ ದೊಡ್ಡದ್ದು ಎಂದು ಹೇಳಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಅಪ್ಪ, ಮಗನ ನಿಜ ಬಣ್ಣ ಬಯಲಾಗಲಿದೆ. ವಿಜಯೇಂದ್ರ ಎಷ್ಟು ಲೂಟಿ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರ ಅವರನ್ನು ಇಡಿ ಕರೆದುಕೊಂಡು ಹೋಗಿಲ್ಲ ಎಂದು ಹೇಳಲಿ, ನಾನು ಅವರಿಗೆ ಸವಾಲು ಹಾಕುತ್ತೇನೆ ಎಂದು ಹೇಳಿದ್ದಾರೆ.!

error: Content is protected !!