ಬೆಂಗಳೂರು,: ನಾಳೆ (ಮೇ 5)ಕ್ಕೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಹಠಾತ್ ಮುಂದೂಡಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ನಾಳೆ ನಿಗದಿಯಾಗಿದ್ದ ಸಂಪುಟ ಸಭೆ ಮೇ 11 ರಂದು ನಡೆಯಲಿದ್ದು, ಮೇ 5 ರಿಂದ 10ರ ಅವಧಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರ್ರಚನೆ ಸಾಧ್ಯತೆ ದಟ್ಟವಾಗಿದ್ದು, ಹೊಸ ಸಂಪುಟ ಸದಸ್ಯರೊಂದಿಗೆ ಮೇ 11ರಂದು ಸಭೆ ನಡೆಯಲಿದೆ ಎನ್ನಲಾಗಿದೆ.

ಇನ್ನು ಪ್ರಧಾನಿ ನರೇಂದ್ರ‌ ಮೋದಿ ಅವರು ವಿದೇಶ ಪ್ರವಾಸದಿಂದ ಬಂದ ಬಳಿಕ ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟ ವಿಷಯಗಳು ಚರ್ಚೆಯಾಗಲಿದ್ದು,‌ ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ಮುಂದೂಡಿಕೆಯಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.