ಬೆಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ ) ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೇ 13 ರಂದು ನಿಧನರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಶನಿವಾರ (ಮೇ 14) ಒಂದು ದಿನ ಶೋಕಾಚರಣೆ ಆಚರಿಸಲು ಆದೇಶ ಹೊರಡಿಸಿದೆ.

ಶೋಕಾಚರಣೆಯಲ್ಲಿ ರಾಜ್ಯದಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಅಲ್ಲದೆ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇನ್ನು ಯುಎಇ ಅಧ್ಯಕ್ಷರಾದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಗ್ಗೆ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಯುಎಇ, ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರ ಮತ್ತು ಪ್ರಪಂಚದ ಜನರೊಂದಿಗೆ ಸಂತಾಪ ವ್ಯಕ್ತಪಡಿಸುತ್ತದೆ ಎಂದು ತಿಳಿಸಲಾಗಿತ್ತು.