ಯುಜಿಸಿ ನೆಟ್ ಪರೀಕ್ಷೆ ಮುಂದೂಡಲಾಗಿದೆ: ರಮೇಶ್ ಪೋಖ್ರಿಯಾಲ್ ನಿಶಾಂಕ್ - BC Suddi
ಯುಜಿಸಿ ನೆಟ್ ಪರೀಕ್ಷೆ ಮುಂದೂಡಲಾಗಿದೆ: ರಮೇಶ್ ಪೋಖ್ರಿಯಾಲ್ ನಿಶಾಂಕ್

ಯುಜಿಸಿ ನೆಟ್ ಪರೀಕ್ಷೆ ಮುಂದೂಡಲಾಗಿದೆ: ರಮೇಶ್ ಪೋಖ್ರಿಯಾಲ್ ನಿಶಾಂಕ್

 

ನವದೆಹಲಿ : ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರದಿಂದಾಗಿ ಮೇ 2ರಿಂದ ಮೇ.17ರವರೆಗೆ ನಿಗದಿಯಾಗಿದ್ದಂತ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಮೇ 2ರಿಂದ ಆರಂಭಗೊಂಡು, ಮೇ.17ಕ್ಕೆ ಮುಕ್ತಾಯಗೊಳ್ಳಬೇಕಿದ್ದಂತ ಯುಜಿಸಿ ನೆಟ್ ಪರೀಕ್ಷೆಯನ್ನು ಕೊರೋನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ಇಂತಹ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಅಂದಹಾಗೆ, ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತೆಯನ್ನು ನಿರ್ಧರಿಸಲು ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್ ಎಫ್) ನೀಡಲು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರವಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಯುಜಿಸಿ ನೆಟ್ ಪರೀಕ್ಷೆ ನಡೆಯುತ್ತದೆ.

ಯುಜಿಸಿ ನೆಟ್ ಪರೀಕ್ಷೆ ಮೇ.2ರಿಂದ ಆರಂಭಗೊಂಡು, ಮೇ.17 ರವರೆಗೆ ನಡೆಯಬೇಕಿತ್ತು. ಆದ್ರೇ, ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ, ಅಭ್ಯರ್ಥಿಗಳು, ಪರೀಕ್ಷಾ ಕಾರ್ಯಕರ್ತರ ಸುರಕ್ಷತೆ, ಯೋಗಕ್ಷೇಮವನ್ನು ಗಣನೆಗೆ ತೆಗೆದುಕೊಂಡು, ಯುಜಿಸಿ ನೆಟ್ ಡಿಸೆಂಬರ್ 2020 (ಮೇ 2021) ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ.