ಬೆಂಗಳೂರಲ್ಲಿ ಯುವತಿಯ ಮೇಲೆ ಆಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಹಿಡಿದ ಪೊಲೀಸರಿಗೆ 5 ಲಕ್ಷ ರೂಪಾಯಿ ಬಹುಮಾನ ಧನ ನೀಡೋದಾಗಿ ಕಮಲ್​ ಪಂತ್​ ಹೇಳಿದ್ದಾರೆ.

ಬೆಂಗಳೂರಲ್ಲಿ ಯುವತಿಯ ಮೇಲೆ ಆಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್​​ನನ್ನು ಬಂಧಿಸಿ ಕರ್ನಾಟಕಕ್ಕೆ ಕರೆತರಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ಪೊಲೀಸರಿಗೆ ಸಿಗದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಆರೋಪಿ ನಾಗೇಶ್​ನನ್ನು ನಿನ್ನೆ ಬಂಧಿಸಲಾಗಿದೆ.