ಬೆಂಗಳೂರು: ಏಪ್ರಿಲ್ 7ರಿಂದ ರಾಜ್ಯದಲ್ಲಿ ಸಾರಿಗೆ ಸಿಬ್ಬಂದಿ ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವುದರಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಲು ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವಂತೆ ಭಾರತೀಯ ರೈಲ್ವೇ ಇಲಾಖೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು.
ಮನವಿಗೆ ಸ್ಪಂದಿಸಿರುವ ಕೇಂದ್ರ ರೈಲ್ವೇ ಇಲಾಖೆಯು ನೈಋತ್ಯ ರೈಲ್ವೇ ಗುರುವಾರದಿಂದ ಏಪ್ರಿಲ್ 14ರ ವರೆಗೆ ಹೆಚ್ಚಿನ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಹೊಸ ವರ್ಷದ ಸಂಭ್ರಮದಲ್ಲಿ ಆಚರಿಸುವ ಯುಗಾದಿ ಹಬ್ಬಕ್ಕೆ ಜನ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವುದು ಹೆಚ್ಚಾಗಿರುತ್ತೆ. ಆದ್ರೆ ಸಾರಿಗೆ ನೌಕರರ ಮುಷ್ಕರದಿಂದ ಜನರಿಗೆ ಸಮಸ್ಯೆಯಾಗಬಾರದೆಂದು ಬೀದರ್, ವಿಜಯಪುರ, ಮೈಸೂರು, ಬಾಗಲಕೋಟೆ, ಕಾರವಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಶೇಷ ರೈಲು ವ್ಯವಸ್ಥೆ ಮಾಡಿದೆ.