ರಾಜ್ಯ ಸರಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ ನೀಡಿದೆ.! - BC Suddi
ರಾಜ್ಯ ಸರಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ ನೀಡಿದೆ.!

ರಾಜ್ಯ ಸರಕಾರದಿಂದ ರೈತ ಸಮುದಾಯಕ್ಕೆ ಶುಭ ಸುದ್ದಿ ನೀಡಿದೆ.!

 

ಬೆಂಗಳೂರು : ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಅನಧಿಕೃತ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಡುವ ಪ್ರಕ್ರಿಯೆಗೆ ಕಂದಾಯ ಇಲಾಖೆ ಚಾಲನೆ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಕ್ಕಾಗಿ ರೈತರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಗಣಕೀಕೃತಗೊಳಿಸಲು ಸಚಿವ ಆರ್. ಅಶೋಕ್ ಆದೇಶಿಸಿದ್ದಾರೆ.

ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 2018-19 ನೇ ಸಾಲಿನಲ್ಲಿ ಅರ್ಜಿ ಸ್ವೀಕಾರಕ್ಕೆ ಕಾಲಾವಕಾಶ ನೀಡಲಾಗಿತ್ತು. ಆದರೆ ಸಾರ್ವತ್ರಿಕ ಚುನಾವಣೆ ಕಾರಣದಿಂದ ತಂತ್ರಾಂಶ ಅಳವಡಿಕೆ ಸಾಧ್ಯವಾಗಿರಲಿಲ್ಲ. ಬಾಕಿ ಎಲ್ಲ ಅರ್ಜಿಗಳನ್ನು ತಂತ್ರಾಂಶಗಳನ್ನು ಅಳವಡಿಸಲು ಸೂಚನೆ ನೀಡಲಾಗಿದ್ದು. ಈ ಮೂಲಕ ಅನಧಿಕೃತವಾಗಿ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.