ರಾಜ್ಯ ಸರಕಾರದಿಂದ ಹೊಸ ಆದೇಶ: ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಇಷ್ಟು ಮಂದಿಗೆ ಅವಕಾಶ.! - BC Suddi
ರಾಜ್ಯ ಸರಕಾರದಿಂದ ಹೊಸ ಆದೇಶ: ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಇಷ್ಟು ಮಂದಿಗೆ ಅವಕಾಶ.!

ರಾಜ್ಯ ಸರಕಾರದಿಂದ ಹೊಸ ಆದೇಶ: ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಇಷ್ಟು ಮಂದಿಗೆ ಅವಕಾಶ.!

ಬೆಂಗಳೂರು : ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ ಮಾಡಲಾಗಿದೆ. ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿನಿನ್ನೆ ಕೊರೋನಾ ಮಹಾಸ್ಪೋಟವೇ ಉಂಟಾಗಿದ್ದು, ಇನ್ನೂ, ಹೊಸದಾಗಿ ರಾಜ್ಯಾಧ್ಯಂತ 34,804 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 143 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ 143 ಮಂದಿ ಬಲಿಯಾಗಿದ್ದಾರೆ.!