ರಾಜ್ಯ ಸರ್ಕಾರ ವಿಳಂಬ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಎನ್.ಡಿ.ಕುಮಾರ್ ಆಗ್ರಹ.! - BC Suddi
ರಾಜ್ಯ ಸರ್ಕಾರ ವಿಳಂಬ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಎನ್.ಡಿ.ಕುಮಾರ್ ಆಗ್ರಹ.!

ರಾಜ್ಯ ಸರ್ಕಾರ ವಿಳಂಬ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಎನ್.ಡಿ.ಕುಮಾರ್ ಆಗ್ರಹ.!

 

ಚಿತ್ರದುರ್ಗ: ರಾಜ್ಯ ಸರ್ಕಾರ ವಿಳಂಬ ಮಾಡದೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್‌ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಡಿ.ಕುಮಾರ್‌ ಆಗ್ರಹಿಸಿದ್ದಾರೆ.

ಈವರೆಗೆ 45 ವರ್ಷ ಮೇಲ್ಪಟ್ಟ ಶೇ 25 ಜನರಿಗಷ್ಟೇ ಲಸಿಕೆ ನೀಡಲಾಗಿದೆ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದೆ. ಸೋಂಕು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ದುರಾಡಳಿತಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ. ಇನ್ನಾದರೂ ಬಿಜೆಪಿ ನಾಯಕರು ಕೆಲಸ ಮಾಡಬೇಕು. ಇಲ್ಲವೇ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಒತ್ತಾಯಿಸಿದ್ದಾರೆ.

ಕೋವಿಡ್‌ ಎರಡನೇ ಅಲೆಗೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಧೋರಣೆಯೇ ಕಾರಣ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿದೆ. ಶೀಘ್ರವೇ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.