ಬೆಂಗಳೂರು: ನರಸಿಂಹಮೂರ್ತಿ ಚಾಮರಾಜನಗರ ಜನವರಿ 25 ನಿರ್ಮಾಪಕ ಉಮಾಪತಿ ಹಾಗೂ ಇತರರ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು,ಕೇಂದ್ರ ಅಪರಾಧ ವಿಭಾಗದ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಆರೋಪಿಗಳು ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದು ಸುಂಕದ ಕಟ್ಟೆ ಬಾರ್ ಒಂದರಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ರಾಬರಿ, ಕಳವು, ಕೊಲೆ ಯತ್ನ, ಸುಲಿಗೆ, ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಜಯನಗರ ಪೊಲೀಸರಿಗೆ ಆರೋಪಿಗಳನ್ನು ಒಪ್ಪಿಸಲಾಗಿದೆ.