ಶನಿವಾರ ಶ್ರೀಲಂಕಾದ ರಾಷ್ಟ್ರವ್ಯಾಪಿ ಕರ್ಫ್ಯೂ ಅನ್ನು ತೆರವುಗೊಳಿಸಿ ಅಲ್ಲಿನ ನೂತನ ಸರ್ಕಾರ ಆದೇಶ ಹೊರಡಿಸಿದೆ.

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ರಾನಿಲ್‌ ವಿಕ್ರಮಸಿಂಘೆ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆ ಹಿನ್ನೆಲೆಯಲ್ಲಿ ಹೊಸ ಸಚಿವ ಸಂಪುಟ ರಚನೆಗೆ ವಿಕ್ರಮಸಿಂಘೆ ಮುಂದಾಗಿದ್ದು, ದೇಶದಾದ್ಯಂತ ವಿಧಿಸಲಾಗಿದ್ದ ಕರ್ಫ್ಯೂ ಅನ್ನು ತೆರವುಗೊಳಿಸಲಾಗಿದೆ.