ಚಿತ್ರದುರ್ಗ : ದೇಶದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್  ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.!

ಮುರುಘಾಮಠದಲ್ಲಿ ಆಯೋಜಿಸಿದ್ದ ಕೃಷಿ ಮತ್ತು ಕೈಗಾರಿಕೆ ಮೇಳ ಉದ್ಘಾಟಿಸಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಭಾರತದಲ್ಲೇ ಮೊದಲ ಬಾರಿಗೆ ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ರೈತರು ಬಳಸುವ ಡೀಸೆಲ್ ಗೆ ಸಬ್ಸಿಡಿ ನೀಡಲು ಸಮ್ಮತಿಸಿದ್ದರು. ಆದರೆ ಕೊರೊನಾ ಕಾರಣದಿಂದಾಗಿ ಇದು ಸಾಧ್ಯವಾಗಿರಲಿಲ್ಲ ಎಂದರು.

ರೈತರು ಬಳಸುವ ಡೀಸೆಲ್ ಮೇಲೆ ಪ್ರತಿ ಲೀಟರ್ ಗೆ 20 ರೂ. ಸಬ್ಸಿಡಿ ನೀಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕ ನಿಲುವು ತೋರಿದ್ದಾರೆ. ಹೀಗಾಗಿ ಈ ಯೋಜನೆ ಶೀಘ್ರವೇ ಜಾರಿಯಾಲಿದೆ ಎಂದು ಹೇಳಿದ್ದಾರೆ.