ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಹೈಕೋರ್ಟ್ ನಿಂದ ಆದೇಶ …! - BC Suddi
ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಹೈಕೋರ್ಟ್ ನಿಂದ ಆದೇಶ …!

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಹೈಕೋರ್ಟ್ ನಿಂದ ಆದೇಶ …!

ಬೆಂಗಳೂರು :ಶಿಕ್ಷಕರ ಸಾಮಾನ್ಯ ವರ್ಗಾವಣೆ ಕೌನ್ಸೆಲಿಂಗ್ ವೇಳೆ 2019-20 ನೇ ಸಾಲಿನ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡುವಂತೆ ಶಿಕ್ಷಣ ಇಲಾಖೆ ಹೊರಡಿಸಿದ್ದ ಅದೇಶವನ್ನು ರದ್ದುಪಡಿಸಿದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಕೆಎಟಿ ಆದೇಶ ಪ್ರಶ್ನಿಸಿ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಹೈಕೋರ್ಟ್ ಪೀಠ ತನ್ನ ತೀರ್ಪಿನಲ್ಲಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ವೇಳೆ 2019-20 ನೇ ಸಾಲಿನ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕು ಎಂಬುದು ನ್ಯಾಯ ಸಮ್ಮತವಲ್ಲ. ಎಲ್ಲಾ ಶಿಕ್ಷಕರನ್ನು ಸಮಾನವಾಗಿ ಕಾಣಬೇಕೇ ಹೊರತು ಆದ್ಯತೆ ಹೆಸರಿನಲ್ಲಿ ತಾರತಮ್ಯ ಮಾಡಬಾರದು ಹಾಗಾಗಿ ಶಿಕ್ಷಣ ಇಲಾಖೆಯ ಆದೇಶ ರದ್ದು ಪಡಿಸಿ ಕೆಎಟಿ ನೀಡಿರುವ ತೀರ್ಪು ಸರಿಯಾಗಿದೆ ಎಂದು ಹೈಕೋರ್ಟ್ ಹೇಳಿದೆ. ಈ ಮೂಲಕ ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದಂತಾಗಿದೆ.!

error: Content is protected !!