ನವದೆಹಲಿ: ಫೆಬ್ರವರಿ 6ರಿಂದ ಆರಂಭವಾಗುವ ವೆಸ್ಟ್​ ಇಂಡೀಸ್​​ ವಿರುದ್ಧದ ಸರಣಿಗೆ ಬಿಸಿಸಿಐ, ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೂರ್ನಿಗೆ ಅಲಭ್ಯರಾಗಿದ್ದ ನಾಯಕ ರೋಹಿತ್​ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರೋಹಿತ್ ಅನುಪಸ್ಥಿತಿ ಕಾರಣ ಕೆ.ಎಲ್‌.ರಾಹುಲ್‌ ಸಾರಥ್ಯದಲ್ಲಿ ಆಡಿದ್ದ ಟೀಂ ಇಂಡಿಯಾ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಹೀನಾಯವಾಗಿ ಸೋತಿತ್ತು. ಇದೀಗ ರೋಹಿತ್ ತಂಡಕ್ಕೆ ಹಿಂದಿರುಗಿದ್ದು, ವಿಂಡೀಸ್ ವಿರುದ್ಧದ ತಲಾ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಮತ್ತು ಟಿ20 ಕ್ರಿಕೆಟ್‌ ಸರಣಿಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಏಕದಿನ ಸರಣಿಗೆ ತಂಡ: ರೋಹಿತ್ ಶರ್ಮಾ, ಕೆಎಲ್​ ರಾಹುಲ್​​, ಋತುರಾಜ್​, ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್​ ಅಯ್ಯರ್​, ದೀಪಕ್​ ಹೂಡಾ, ರಿಷಬ್​ ಪಂತ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಲ್​, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಶ್ನೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್‌ ಕೃಷ್ಣ, ಅವೇಶ್​ ಖಾನ್.

ಟಿ-20 ಸರಣಿಗೆ ತಂಡ: ರೋಹಿತ್ ಶರ್ಮಾ, ಕೆಎಲ್​ ರಾಹುಲ್, ಇಶಾನ್​ ಕಿಶಾನ್, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ವೆಂಕಟೇಶ್​ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಶ್ನೋಯ್, ಅಕ್ಷರ್ ಪಟೇಲ್​​, ಯಜುವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್.