ಶಾಲಾ ಶುಲ್ಕ ಕಡಿಮೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ - BC Suddi
ಶಾಲಾ ಶುಲ್ಕ ಕಡಿಮೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ

ಶಾಲಾ ಶುಲ್ಕ ಕಡಿಮೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ

 

ನವದೆಹಲಿ: ಆನ್ಲೈನ್ ಕ್ಲಾಸ್ ನಿಂದಾಗಿ ನಿರ್ವಹಣೆ ವೆಚ್ಚ ಇಳಿಕೆಯಾಗಿರುವುದರಿಂದ ಶಾಲಾ ಶುಲ್ಕ ಕಡಿಮೆ ಮಾಡುವಂತೆ ಸುಪ್ರೀ ಕೋರ್ಟ್ನ ನ್ಯಾಯಮೂರ್ತಿ ಎಂ.ಎಂ. ಖನ್ವಿಲ್ಕರ್ ಮತ್ತು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ಪೀಠ ಶಾಲಾ ಶುಲ್ಕ ಕಡಿಮೆ ಮಾಡಲು ಸೂಚಿಸಿದೆ. ಸೂಚನೆ ನೀಡಿದೆ.

ದೇಶದಲ್ಲಿ ಕೋವಿಡ್ ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ಆನ್ಲೈನ್ ತರಗತಿಗಳು ಮಾತ್ರ ನಡೆಯುತ್ತಿರುವುದರಿಂದ ಶಾಲಾ ಶುಲ್ಕವನ್ನು ಕಡಿತಗೊಳಿಸಬೇಕೆಂದು ಹೇಳಲಾಗಿದೆ. ಕ್ಯಾಂಪಸ್ನಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಎಲ್ಲಾ ಸೌಲಭ್ಯಗಳು ಮುಚ್ಚಿರುವುದರಿಂದ ನಿರ್ವಹಣೆ ವೆಚ್ಚ ಇಲ್ಲವಾಗಿದೆ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳ ಶುಲ್ಕವನ್ನು ಕಡಿತಗೊಳಿಸಬೇಕು ಎಂದು ಹೇಳಲಾಗಿದೆ.

ಟ್ಯೂಷನ್ ಶುಲ್ಕದಲ್ಲಿ ಶೇಕಡ 30 ರಷ್ಟು ಮನ್ನಾ ಮಾಡಬೇಕು ಎಂದು ರಾಜಾಸ್ಥಾನ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಪೀಠ ಈ ಸೂಚನೆ ನೀಡಿದೆ.