ಬೆಂಗಳೂರು:ಇಲಾಖೆಯಲ್ಲಿ ಖಾಲಿ ಇರುವ 1000 ಪೇದೆ ಹಾಗೂ 100 ಸಬ್ ಇನ್ಸೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು KPSCಗೆ ಪ್ರಸ್ತಾವನೆ ಕಳುಹಿಸಿದ್ದೇವೆಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಇಲಾಖೆಗೆ ನಿರೀಕ್ಷೆಗೂ ಮೀರಿ ಆದಾಯ ಬರುತ್ತಿದೆ. ಕಳೆದ ವರ್ಷ ಈ ವೇಳೆಗೆ 17,225 ಕೋಟಿ ರೂ. ಸಂಗ್ರಹವಾಗಿತ್ತು.
ಈ ವರ್ಷ 19,897 ಕೋಟಿ ರೂ. ಸಂಗ್ರಹವಾಗಿದ್ದು, 29000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ. ಹಾಗಾಗಿ ಮದ್ಯದ ದರ ಪರಿಷ್ಕರಣೆ ಸದ್ಯ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.