ಆಗ್ರಾ: ರಾಮಚರಿತಮಾನಸದ ಕೆಲವು ಪದ್ಯಗಳು ಸಮಾಜದಲ್ಲಿ ತಾರತಮ್ಯ ಬೋಧಿಸುತ್ತವೆ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದ SP ನಾಯಕ ಹಾಗೂ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಹಿಂದೂ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಆಗ್ರಾದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ನಾಯಕ ಸೌರಭ ಶರ್ಮಾ, ‘ಸ್ವಾಮಿ ಪ್ರಸಾದ್ ಮೌರ್ಯ ನಮ್ಮ ಧಾರ್ಮಿಕ ಗ್ರಂಥಕ್ಕೆ ಅವಮಾನ ಮಾಡಿದ್ದಾರೆ. ಹೀಗಾಗಿ, ಅವರ ನಾಲಿಗೆ ಕತ್ತರಿಸಿದವರಿಗೆ 51,000 ರೂ. ಚೆಕ್ ಬಹುಮಾನ ನೀಡಲಾಗುವುದು’ ಎಂದು ಘೋಷಿಸಿದ್ದಾರೆ.