ಸರಕಾರದಿಂದ ಮಹತ್ವದ ಆದೇಶ: ಬೆಂಗಳೂರು ವ್ಯಾಪ್ತಿಯಲ್ಲಿ ದಿನಸಿ ಅಂಗಡಿ ತೆರೆಯಲು ಎರಡು ಗಂಟೆ ಎಕ್ಸೆಂಡ್.! - BC Suddi
ಸರಕಾರದಿಂದ ಮಹತ್ವದ ಆದೇಶ: ಬೆಂಗಳೂರು ವ್ಯಾಪ್ತಿಯಲ್ಲಿ ದಿನಸಿ ಅಂಗಡಿ ತೆರೆಯಲು ಎರಡು ಗಂಟೆ ಎಕ್ಸೆಂಡ್.!

ಸರಕಾರದಿಂದ ಮಹತ್ವದ ಆದೇಶ: ಬೆಂಗಳೂರು ವ್ಯಾಪ್ತಿಯಲ್ಲಿ ದಿನಸಿ ಅಂಗಡಿ ತೆರೆಯಲು ಎರಡು ಗಂಟೆ ಎಕ್ಸೆಂಡ್.!

ಬೆಂಗಳೂರು : ರಾಜ್ಯ ಸರ್ಕಾರ ಇದೀಗ ಕೊರೊನಾ ಕರ್ಪ್ಯೂ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಪ್ರಸ್ತುತ ಮಾರುಕಟ್ಟೆಗಳಲ್ಲಿ ಆಗುತ್ತಿರುವ ಜನಸಂದಣಿ ತಪ್ಪಿಸಲು ಇಂದಿನಿಂದಲೇ ಅನ್ವಯವಾಗುವಂತೆ ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂಉ ಹಾಪ್ ಕಾಮ್ಸ್, ಎಲ್ಲಾ ಹಾಲಿನ ಬೂತುಗಳು, ತಳ್ಳುಗಾಡಿ ಮೂಲಕ ಹಣ್ಣು, ತರಕಾರಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡದೇ, ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುವುದು ಹಾಗೂ ಕೋವಿಡ್ 19 ನಿಯಮಗಳನ್ನು ಪಾಲಿಸುವುದರೊಂದಿಗೆ ಅನುಮತಿಸಲಾಗಿದೆ. ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಿದೆ.