ಚಿತ್ರದುರ್ಗ : ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಸದ್ಯ ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ.
ಟಾಟಾ ಸಫಾರಿಯಲ್ಲಿ ಪ್ರಯಾಣಿಸುತ್ತಿದ್ದ ಹೊಸದುರ್ಗದ ನೇಮಿರಾಜ್ (58), ಅವರ ಪತ್ನಿ ನಂದಾ (53) ಹಾಗೂ ಕ್ಯಾಂಟರ್ ಚಾಲಕ ಪುಣೆಯ ರಂಗ (35) ಮೃತ ದುರ್ದೈವಿಗಳು.
ಟಾಟಾ ಸಫಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ದಾಟಿ ಶಿರಾದತ್ತ ಸಾಗುತ್ತಿದ್ದ ಕ್ಯಾಂಟರ್ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.