ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ: ಕೆ.ಎಸ್.ಈಶ್ವರಪ್ಪ.! - BC Suddi
ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ: ಕೆ.ಎಸ್.ಈಶ್ವರಪ್ಪ.!

ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ: ಕೆ.ಎಸ್.ಈಶ್ವರಪ್ಪ.!

 

ಮಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರ ಎಲ್ಲ ಬೇಡಿಕೆಯನ್ನು ಈಡೇರಿಸುವುದಕ್ಕೆ ಸಾಧ್ಯವೇ ಇಲ್ಲ, ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ಸಾರಿಗೆ ನೌಕರರ ಬೇಡಿಕೆ ಒಂದು ಪರ್ಸೆಂಟ್ ಕೂಡಾ ನ್ಯಾಯ ಸಮ್ಮತವಾಗಿಲ್ಲ. ಸರ್ಕಾರ ಈ ಬೇಡಿಕೆಯನ್ನು ಒಪ್ಪುವುದಕ್ಕೂ ಸಾಧ್ಯವಿಲ್ಲ ಎಂದರು.

ನೌಕರರು ಕೋಡಿಹಳ್ಳಿ ಚಂದ್ರಶೇಖರ್ ನಾಯಕತ್ವವನ್ನು ಬಿಟ್ಟು, ಸರ್ಕಾರದ ಜೊತೆ ಮಾತುಕತೆ ನಡೆಸಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿದರೆ ಎಲ್ಲಾ ಇಲಾಖೆಗಳ ನೌಕರರೂ ಇದೇ ಮನವಿಯನ್ನು ಮಾಡುತ್ತಾರೆ. ಅದು ಖಂಡಿತವಾಗಿಯೂ ಸಾಧ್ಯವಿಲ್ಲ ಎಂದು ಹೇಳಿದರು.

error: Content is protected !!