ಸಾರಿಗೆ ನೌಕರರ ಪ್ರತಿಭಟನೆ: ಹೈಕೋರ್ಟ್  ಸೂಚನೆ ಇದು.! - BC Suddi
ಸಾರಿಗೆ ನೌಕರರ ಪ್ರತಿಭಟನೆ: ಹೈಕೋರ್ಟ್  ಸೂಚನೆ ಇದು.!

ಸಾರಿಗೆ ನೌಕರರ ಪ್ರತಿಭಟನೆ: ಹೈಕೋರ್ಟ್  ಸೂಚನೆ ಇದು.!

ಬೆಂಗಳೂರು : ಸಾರಿಗೆ ಸಂಚಾರ ವ್ಯವಸ್ಥೆಯ ವ್ಯತ್ಯಯ ಮೂಲಭೂತ ಹಕ್ಕಾಗಿದೆ. ಈ ಹಕ್ಕಿಗೆ ಧಕ್ಕೆಯಾಗುವ ಹಿನ್ನಲೆಯಲ್ಲಿ ಮುಷ್ಕರ ಬಿಟ್ಟು ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಈ ಕುರಿತಂತೆ ಇಂದು ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಓಕಾ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು, ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರ ವ್ಯತ್ಯಯದಿಂದಾಗಿ ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ. ಈಗ ಶೇ.44ರಷ್ಟು ಬಸ್ ಸಂಚಾರ ಮಾತ್ರವೇ ಇದೆ. ಕೋವಿಡ್ ನ ಸಂಕಷ್ಟದಿಂದಾಗಿ ಜನರು ತತ್ತರಿಸಿದ್ದಾರೆ. ಲಸಿಕಾ ಕೇಂದ್ರಕ್ಕೆ ಜನರು ಹೋಗೋದಕ್ಕೂ ಕಷ್ಟ ಆಗಿದೆ. ಆಸ್ಪತ್ರೆಗೆ ಹೋಗೋದಕ್ಕೆ ಬಸ್ ಸಂಚಾರ ಇಲ್ಲದೇ ಕಷ್ಟ ಪಡುವಂತಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ಇನ್ನೂ ಮುಂದುವರೆದು, ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ. ಬಸ್ ಇಲ್ಲದೇ ಲಸಿಕಾ ಕೇಂದ್ರಗಳಿಗೆ ಜನರು ಲಸಿಕೆ ಹಾಕಿಸಿಕೊಳ್ಳೋದಕ್ಕೆ ತೆರಳಲು ಕಷ್ಟ ಆಗಿದೆ. ಸಾರಿಗೆ ಸಂಚಾರ ವ್ಯವಸ್ಥೆ ಜನರ ಮೂಲಭೂತ ಹಕ್ಕಾಗಿದೆ. ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರೋದ್ರಿಂದ ಜನರ ಮೂಲ ಭೂತ ಹಕ್ಕಿಗೆ ಧಕ್ಕೆಯಾಗಲಿದೆ. ಹೀಗಾಗಿ ನಿಮ್ಮ ಬೇಡಿಕೆಯನ್ನು ಕಾಯ್ದಿರಿಸಿ, ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರ ಕೂಟಕ್ಕೆ ಹೈಕೋರ್ಟ್ ನೋಟಿಸ್ ನಲ್ಲಿ ತಿಳಿಸಿದೆ.