ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣದಲ್ಲಿಂದು ತುರ್ತು ಸಭೆ ಕರೆದಿದ್ದು, 4 ನಿಗಮಗಳ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದಾರೆ.
ಈ ಮಧ್ಯೆ, ನಾಳೆಯಿಂದ ಮುಂದಿನ ಆದೇಶದವರೆಗೆ ಎಲ್ಲಾ ಸಾರಿಗೆ ನೌಕರರ ರಜೆ ರದ್ದುಗೊಳಿಸಿ ಕೆಎಸ್ ಆರ್ ಟಿಸಿ ನಿರ್ದೇಶಕ ಶಿವಯೋಗಿ ಕಳಸದ ಆದೇಶ ಹೊರಡಿಸಿದ್ದಾರೆ. ವಾರದ ರಜೆ, ತುರ್ತು ರಜೆ ಹೊರತುಪಡಿಸಿ ಅನಗತ್ಯ ರಜೆ ಹಾಕಿದರೆ ವೇತನ ಕಡಿತ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.