ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್.! - BC Suddi
ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್.!

ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್.!

 

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕಳೆದ ಆರು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.ಇದರ ಮಧ್ಯೆ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಸರ್ಕಾರ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಇದೀಗ ಖಾಸಗಿ ಪ್ರಯಾಣಿಕ ವಾಹನಗಳ ಮಾಲೀಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ಹೊಸ ವಾಹನಗಳ ನೋಂದಣಿ ಹೊರತುಪಡಿಸಿ ಇತರ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯವಾಗುವಂತೆ ಏಪ್ರಿಲ್ 15ರೊಳಗೆ ಪಾವತಿಸಬೇಕಾಗಿದ್ದ ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 30 ರವರೆಗೆ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.