ಬೆಂಗಳೂರು: ಸಾರ್ವಜನಿಕರು ಹಾಗೂ ಸವಾರರಿಗೆ ಟೋಯಿಂಗ್ ವ್ಯವಸ್ಥೆಯಿಂದ ತೊಂದರೆಯಾಗದಂತೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಟೋಯಿಂಗ್ ವ್ಯವಸ್ಥೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಸಾರ್ವಜನಿಕರು ಹಾಗೂ ಸವಾರರಿಗೆ ತೊಂದರೆಯಾಗದಂತೆ ಟೋಯಿಂಗ್ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು. ಈ ವಿಷಯದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದರು.