ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳಿಗೂ ಕೊರೊನಾ ವೈರಸ್ ಸೋಂಕು - BC Suddi
ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳಿಗೂ ಕೊರೊನಾ ವೈರಸ್ ಸೋಂಕು

ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳಿಗೂ ಕೊರೊನಾ ವೈರಸ್ ಸೋಂಕು

 

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಲ್ಲೇ ಅವರ ಮೊಮ್ಮಗಳಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಏಪ್ರಿಲ್ 15 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸೌಂದರ್ಯ ಅವರ ಪತಿ ಡಾ. ನಿರಂಜನ್ ಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೂ ನಿನ್ನೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪರ್ಮಿನಾಲಾಜಿಸ್ಟ್ ಸತ್ಯನಾರಾಯಣ ನೇತೃತ್ವದ ವೈದ್ಯರ ತಂಡದಿಂದ ಸಿಎಂ ಬಿಎಸ್ ವೈಗೆ ಚಿಕಿತ್ಸೆ ನೀಡಲಾಗುತ್ತಿದೆ