ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ಒಟ್ಟು 4 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಮಾರ್ಚ್ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ sbi.co.in/web/career ಗೆ ಭೇಟಿ ನೀಡಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಯಸ್ಸಿನ ಅರ್ಹತೆ: ಅಭ್ಯರ್ಥಿಗಳು 55 ವರ್ಷ ವಯಸ್ಸಿನ ಒಳಗಿನವರಾಗಿರಬೇಕು.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಾಫ್ಟ್‌ವೇರ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಎಂಬಿಎ ಪದವಿ ಹೊಂದಿರುವ ಅಭ್ಯರ್ಥಿಗಳಿಗೂ ಆದ್ಯತೆ ನೀಡಲಾಗುವುದು.

ಹುದ್ದೆಗಳ ವಿವರ:
ಮುಖ್ಯ ಮಾಹಿತಿ ಅಧಿಕಾರಿ – 1 ಹುದ್ದೆ
ಮುಖ್ಯ ತಂತ್ರಜ್ಞಾನ ಅಧಿಕಾರಿ – 1 ಹುದ್ದೆ
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (ಇ-ಚಾನೆಲ್) – 1
ಹುದ್ದೆಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (ಕೋರ್ ಬ್ಯಾಂಕಿಂಗ್) – 1 ಹುದ್ದೆ

ಅರ್ಜಿ ಶುಲ್ಕ: SC, ST ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ರೂ. 750 ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಈ ಶುಲ್ಕವನ್ನು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಮೂಲಕ ಮಾತ್ರ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ
sbi.co.in. ವೆಬ್‌ಸೈಟ್‌ನ ಮುಖಪುಟದಲ್ಲಿ ಪ್ರಸ್ತುತ ಖಾಲಿ ಹುದ್ದೆಯ ಮೇಲೆ ಕ್ಲಿಕ್ ಮಾಡಿ. ಈಗ ‘RECRUITMENT OF SPECIALIST CADRE OFFICERS ON CONTRACTLE BASIS’ ಲಿಂಕ್ ಅನ್ನು ಕ್ಲಿಕ್ ಮಾಡಿ, ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಿ. ನೋಂದಣಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.