ಹವಾಮಾನ ಇಲಾಖೆಯಿಂದ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.! - BC Suddi
ಹವಾಮಾನ ಇಲಾಖೆಯಿಂದ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.!

ಹವಾಮಾನ ಇಲಾಖೆಯಿಂದ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ.!

ಬೆಂಗಳೂರು : ಹವಾಮಾನ ಇಲಾಖೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಹಾಗೂ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.

ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕಲಬುರಗಿಯಲ್ಲಿ ಅತೀ ಹೆಚ್ಚು 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಉಳಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!