ಬೆಂಗಳೂರು:ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ ಕಾರಣ ಹೀಗಾಗಿದ್ದು, ಸಿದ್ದರಾಮಯ್ಯ ಅವರು ಸತ್ಯವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದು, ಇದು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಿದೆ ಎಂದರು.

ಇನ್ನು ಬಿಜೆಪಿ ಸರಕಾರ ಹಿಂದುಳಿದ ವರ್ಗಗಳ ಪರ ಇದ್ದು, ದೇಶದಲ್ಲಿ ಮೊದಲ ಬಾರಿಗೆ ಸಂವಿಧಾನಬದ್ಧವಾಗಿ ಹಿಂದುಳಿದ ವರ್ಗಗಳಿಗೆ ಆಯೋಗ ರಚಿಸಿದ್ದು ನರೇಂದ್ರ ಮೋದಿಯವರ ಸರಕಾರ ಎಂದು ಹೇಳಿದ್ದಾರೆ.