ಬೆಂಗಳೂರು: ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್​ ತಿಂಗಳಿಂದ ಮತ್ತೆ ಮುಂಗಾರು ಚುರುಕುಗೊಂಡಿದೆ. ಜುಲೈ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ ಮಳೆರಾಯ, ಕಳೆದ 2 ವಾರದಿಂದ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದಾನೆ. ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಈ ಬಾರಿ ಮುಂಗಾರು ಉತ್ತಮವಾಗಿದ್ದರಿಂದ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. !